alex Certify BREAKING: ಕಾರ್ -ಟ್ರಕ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 9 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಾರ್ -ಟ್ರಕ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 9 ಮಂದಿ ಸಾವು

ರಾಜಸ್ಥಾನದ ಕರೌಲಿಯಲ್ಲಿ ಕಾರ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ 9 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಕಾರ್ ನಲ್ಲಿದ್ದ ನಾಲ್ವರು ಗಾಯಗೊಂಡಿದ್ದು, ಅವರನ್ನು ಕರೌಲಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಕರೌಲಿ-ಮಂಡ್ರಾಯಲ್ ರಸ್ತೆಯ ದುಂಡಾಪುರ ತಿರುವಿನ ಬಳಿ ಸಂಜೆ ವೇಗವಾಗಿ ಬಂದ ಕಾರ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಡಿಕ್ಕಿಯ ಶಬ್ದದಿಂದ ಗಾಬರಿಗೊಂಡ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿ ಪೊಲೀಸರಿಗೆ ಮತ್ತು ಆಂಬುಲೆನ್ಸ್‌ಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಎಲ್ಲಾ ಗಾಯಾಳುಗಳನ್ನು ಕರೌಲಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದ್ದಾರೆ. ಗಾಯಗೊಂಡ ನಾಲ್ವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ನೀಲಭ್ ಸಕ್ಸೇನಾ ಮತ್ತು ಎಸ್ಪಿ ಬ್ರಿಜೇಶ್ ಜ್ಯೋತಿ ಉಪಾಧ್ಯಾಯ ಅವರು ಅಪಘಾತದ ಸ್ಥಳಕ್ಕೆ ಆಗಮಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಪರಿಶೀಲಿಸಿದರು. ಎಡಿಎಂ ರಾಜವೀರ್ ಚೌಧರಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...