alex Certify ಬಿಜೆಪಿ ಮುಖಂಡನಿಂದ ಅತ್ಯಾಚಾರ, ಮಹಿಳೆಯ ಮಗಳಿಗೂ ಕಿರುಕುಳ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಮುಖಂಡನಿಂದ ಅತ್ಯಾಚಾರ, ಮಹಿಳೆಯ ಮಗಳಿಗೂ ಕಿರುಕುಳ ಆರೋಪ

ಜೋಧ್‌ಪುರ(ರಾಜಸ್ಥಾನ): ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮತ್ತು ಆಕೆಯ ಹದಿಹರೆಯದ ಮಗಳಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಸ್ಥಳೀಯ ಬಿಜೆಪಿ ಮುಖಂಡ ಸೇರಿ ಹಲವರ ವಿರುದ್ಧ ರಾಜಸ್ಥಾನದ ಪಾಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಹಿಳೆಯ ವೈದ್ಯಕೀಯ ಪರೀಕ್ಷೆ ನಡೆಸಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೋಹನ್‌ ಲಾಲ್ ಜಾಟ್ ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ಇತರೆ ನಾಲ್ವರ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಕಿರುಕುಳದ ದೂರು ದಾಖಲಿಸಿದ್ದಾರೆ ಎಂದು ಸರ್ಕಲ್ ಆಫೀಸರ್(ಸೋಜತ್ ಸಿಟಿ) ಮೃತ್ಯುಂಜಯ್ ಮಿಶ್ರಾ ಹೇಳಿದ್ದಾರೆ.

ಜಾಟ್ ಸ್ಥಳೀಯ ಮಟ್ಟದ ಬಿಜೆಪಿ ಮುಖಂಡ. ಒಂದು ತಿಂಗಳ ಹಿಂದೆ ವಸತಿ ಪ್ರಾಜೆಕ್ಟ್‌ನ ಪ್ಲಾಟ್‌ನ ಒಪ್ಪಂದಕ್ಕೆ ಸಂಬಂಧಿಸಿದಂತೆ ಮಹಿಳೆ ಜಾಟ್‌ ನನ್ನು ಭೇಟಿಯಾಗಿದ್ದಳು. ಮಹೇಶ್ ಚಂದಕ್ ಎಂಬಾತ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮತ್ತು ತನ್ನ ಹದಿಹರೆಯದ ಮಗಳಿಗೆ ಕಿರುಕುಳ ನೀಡಿದ್ದಾನೆ. ಇಬ್ಬರು ಮಹಿಳೆಯರೂ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ಜಾಟ್ ಈ ಆರೋಪಗಳನ್ನು ನಿರಾಕರಿಸಿದ್ದಾರೆ. ಪೊಲೀಸರಿಂದ ಪ್ರಕರಣದ ಬಗ್ಗೆ ತಿಳಿದುಕೊಂಡಿದ್ದು, ತನಿಖೆಗೆ ಸಹಕರಿಸುವುದಾಗಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...