ನಿನ್ನೆಯ ಪಂದ್ಯದಲ್ಲಿ ಹೈದ್ರಾಬಾದ್ ತಂಡ ಪಂಜಾಬ್ ಕಿಂಗ್ಸ್ ಎದುರು ಕೇವಲ ಮೂರು ರನ್ ಗಳಿಂದ ರೋಚಕ ಜಯ ಸಾಧಿಸಿದೆ. ಕೊನೆ ಹಂತದವರೆಗೂ ಫೈಟಿಂಗ್ ಕೊಟ್ಟ ಪಂಜಾಬ್ ಕಿಂಗ್ಸ್ ನ ಯುವ ಆಟಗಾರರ ಬ್ಯಾಟಿಂಗ್ ಗೆ ಕ್ರಿಕೆಟ್ ಪ್ರೇಮಿಗಳಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಕಡಿಮೆ ಮೊತ್ತಕ್ಕೆ ಖರೀದಿಯಾದ ಆಟಗಾರರೇ ಐಪಿಎಲ್ ನಲ್ಲಿ ಮಿಂಚುತ್ತಿರುವುದು ಎಂದಿದ್ದಾರೆ.
ಇಂದು ಜೈಪುರ್ ನಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಗುಜರಾತ್ ಟೈಟನ್ಸ್ ಮುಖಾಮುಖಿಯಾಗಲಿದ್ದು, ಈ ಬಾರಿ ಐಪಿಎಲ್ ನಲ್ಲಿ ಸೋಲಿಲ್ಲದ ಸರದಾರರಾಗಿರುವ ರಾಜಸ್ಥಾನ್ ರಾಯಲ್ಸ್ ಗೆ ಗುಜರಾತ್ ಟೈಟನ್ಸ್ ಯಾವ ರೀತಿ ಉತ್ತರ ನೀಡಲಿದೆ ಕಾದು ನೋಡಬೇಕಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಓಪನಿಂಗ್ ಬ್ಯಾಟ್ಸ್ಮನ್ ಜಾಸ್ ಬಟ್ಲರ್ ತಮ್ಮ ಹಳೆಯ ಫಾರ್ಮ್ ಗೆ ಮರಳಿದ್ದು, ರಾಜಸ್ಥಾನ್ ರಾಯಲ್ಸ್ ನ ಬ್ಯಾಟಿಂಗ್ ಬಲ ಇನ್ನಷ್ಟು ಹೆಚ್ಚಿಸಿದಂತಾಗಿದೆ.