
ಉದಯಪುರ: ರಾಜಸ್ಥಾನದ ಉದಯಪುರದಲ್ಲಿ ಸಾರ್ವಜನಿಕ ಕಾರ್ಯಕ್ರಮದ ವೇಳೆ ರಜಪೂತ ಕರ್ಣಿ ಸೇನಾ ಅಧ್ಯಕ್ಷರ ಮೇಲೆ ಗುಂಡು ಹಾರಿಸಲಾಗಿದೆ.
ಭಾನುವಾರ ಉದಯಪುರದಲ್ಲಿ ನಡೆದ ಸಭೆಯೊಂದರಲ್ಲಿ ರಾಜಸ್ಥಾನದ ಶ್ರೀ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಭನ್ವರ್ ಸಿಂಗ್ ಮೇಲೆ ಗುಂಡು ಹಾರಿಸಲಾಯಿತು. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಗುಂಡು ಹಾರಿಸಿದ ತಕ್ಷಣ ಸಭೆಯಲ್ಲಿದ್ದ ಇತರ ಜನರು ದಾಳಿಕೋರನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಸಭೆ ನಡೆಯುತ್ತಿದ್ದಾಗ ಕಿಕ್ಕಿರಿದ ಸಭೆಯಲ್ಲಿ ಇದ್ದಕ್ಕಿದ್ದಂತೆ ಯುವಕನೊಬ್ಬ ಗುಂಡು ಹಾರಿಸಿದನು. ಘಟನೆ ನಡೆದಾಗ ಉದಯಪುರದ ಬಿಎನ್ ಸಂಸ್ಥಾನದಲ್ಲಿ ಸಭೆ ನಡೆಯುತ್ತಿತ್ತು. ಗುಂಡಿನ ದಾಳಿಯ ನಂತರ ಭನ್ವರ್ ಸಿಂಗ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಆರೋಪಿ ಭನ್ವರ್ ಸಿಂಗ್ ಅವರನ್ನು ತನ್ನ ಹುದ್ದೆಯಿಂದ ತೆಗೆದುಹಾಕಿದ್ದರಿಂದ ಅವರ ಮೇಲೆ ಕೋಪಗೊಂಡಿದ್ದರು ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.