alex Certify ನೆರವು ಕೋರಿ ಬಂದ ಅತ್ಯಾಚಾರ ಸಂತ್ರಸ್ತೆಗೆ ಸೆಕ್ಸ್ ಗೆ ಬೇಡಿಕೆಯಿಟ್ಟ ಪೊಲೀಸ್ ಅಧಿಕಾರಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೆರವು ಕೋರಿ ಬಂದ ಅತ್ಯಾಚಾರ ಸಂತ್ರಸ್ತೆಗೆ ಸೆಕ್ಸ್ ಗೆ ಬೇಡಿಕೆಯಿಟ್ಟ ಪೊಲೀಸ್ ಅಧಿಕಾರಿ ಅರೆಸ್ಟ್

ಜೈಪುರ್: ಅತ್ಯಾಚಾರ ಸಂತ್ರಸ್ತೆಯೊಂದಿಗೆ ಲೈಂಗಿಕ ಕ್ರಿಯೆಗೆ ಬೇಡಿಕೆ ಇಟ್ಟಿದ್ದ ಪೊಲೀಸ್ ಅಧಿಕಾರಿಯನ್ನು ಬಂಧಿಸಲಾಗಿದೆ.

ರಾಜಸ್ಥಾನ ಪೊಲೀಸ್ ಸೇವಾ ಅಧಿಕಾರಿಯಾಗಿರುವ ಸಹಾಯಕ ಪೊಲೀಸ್ ಆಯುಕ್ತ ಕೈಲಾಶ್ ಬೊಹ್ರಾ ಅವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಅತ್ಯಾಚಾರ ಸಂತ್ರಸ್ತೆಗೆ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಕೈಲಾಶ್ ಬೊಹ್ರಾ ಹಣ ಕೊಡಲು ಸಾಧ್ಯವಾಗದ ಮಹಿಳೆಯ ಅಸಹಾಯಕತೆಯನ್ನು ದುರುಪಯೋಗಪಡಿಸಿಕೊಂಡು ಲೈಂಗಿಕ ಬಯಕೆ ಈಡೇರಿಸುವಂತೆ ಬಲವಂತ ಮಾಡಿದ್ದಾರೆ.

ಮಹಿಳೆಯನ್ನು ಕಚೇರಿಯ ಸಮಯದ ನಂತರ ಭೇಟಿಯಾಗಲು ಒತ್ತಾಯಿಸಿದ್ದಾರೆ. ಮಹಿಳೆಯ ದೂರನ್ನು ಪರಿಶೀಲಿಸಿದ ನಂತರ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಲಾಗಿದೆ. ಆರೋಪಿ ರಜಾ ದಿನವಾದ ಭಾನುವಾರ ಮಹಿಳೆಯನ್ನು ತನ್ನ ನಿವಾಸಕ್ಕೆ ಕರೆಸಿಕೊಂಡಿದ್ದ ವೇಳೆ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೈಲಾಶ್ ಬೊಹ್ರಾ ಅವರು ಜೈಪುರದ ಮಹಿಳಾ ಅಪರಾಧಗಳ ವಿರುದ್ಧದ ರಾಜ್ಯ ಪೊಲೀಸರ ವಿಶೇಷ ಘಟಕದ ಸಹಾಯಕ ಪೊಲೀಸ್ ಆಯುಕ್ತರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...