ವಿವಾಹಿತ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಕ್ಕಾಗಿ ಮಹಿಳೆಯೊಬ್ಬರನ್ನು ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಅರೆಬೆತ್ತಲೆಯಾಗಿ ಮೆರವಣಿಗೆ ಮಾಡಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಸರ್ವಾಡಿ ಗ್ರಾಮದಲ್ಲಿ ನಡೆದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಪೊಲೀಸರ ಪ್ರಕಾರ, ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯ ಪತ್ನಿ ಮತ್ತು ಕುಟುಂಬ ಸದಸ್ಯರಿಗೆ ಮಹಿಳೆಯೊಂದಿಗಿನ ಸಂಬಂಧದ ಬಗ್ಗೆ ತಿಳಿದಿತ್ತು. ವಿಡಿಯೋದಲ್ಲಿ ಮಹಿಳೆಯೊಬ್ಬರು ಅರೆಬೆತ್ತಲೆಯಾಗಿರುವ ಸಂತ್ರಸ್ತೆಯನ್ನು ಕೂದಲಿನಿಂದ ಎಳೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ಸಂದಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾದ ನಂತರ, ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಬಾರ್ಮರ್, ಕುಂದನ್ ಕವಾರಿಯಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.