
ಜೈಪುರ: ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಕ್ಷಣ ಕ್ಷಣಕ್ಕೂ ಕುತೂಹಲ ಇಮ್ಮಡಿಗೊಳಿಸುತ್ತಿದ್ದು, ರಾಜಸ್ಥಾನದಲ್ಲಿ ಬಿಜೆಪಿ ಮಿಂಚಿನ ಓಟ ಆರಂಭವಾಗಿದೆ.
ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದು, ತೆಲಂಗಾಣದಲ್ಲಿ ಹಾಗೂ ಚತ್ತೀಸ್ ಗಡದಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.
ಇನ್ನು ರಾಜಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿ ವಸುಂಧರಾರಾಜೆ ಭಾರಿ ಮುನ್ನಡೆಯಲ್ಲಿದ್ದಾರೆ. ಹಾಲಿ ಸಿಎಂ ಕಾಂಗ್ರೆಸ್ ನ ಅಶೋಕ್ ಗೆಹ್ಲೋಟ್ ಸಂಪುಟಕ್ಕೆ ಶಾಕ್ ಆಗಿದ್ದು, ಸಂಪುಟದ 8 ಸಚಿವರೇ ಹಿನ್ನಡೆ ಪಡೆದಿದ್ದಾರೆ.
ಈವರೆಗೆ ರಾಜಸ್ಥಾನದಲ್ಲಿ ಬಿಜೆಪಿ 118 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 68 ಇತರೆ 13 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿವೆ.