ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಿನ್ನಡೆಯಲ್ಲಿದ್ದು, ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ವಸುಂಧರಾ ರಾಜೆ ಗೆಲುವು ಸಾಧಿಸಿದ್ದಾರೆ.
ರಾಜಸ್ಥಾನದ ಜಲ್ರಾಪಠಾಣ್ ಕ್ಷೇತ್ರದಲ್ಲಿ ಬಿಜೆಪಿಯ ವಸುಂಧರಾ ರಾಜೆ ಜಯಭೇರಿ ಭಾರಿಸಿದ್ದಾರೆ. ಇತ್ತೀಚಿನ ಮಾಹಿತಿ ಪ್ರಕಾರ ರಾಜಸ್ಥಾನದಲ್ಲಿ ಬಿಜೆಪಿ 112 ಕ್ಷೇತ್ರಗಳಲ್ಲಿ ಮುನ್ನಡೆಯಲಿದ್ದು, ಕಾಂಗ್ರೆಸ್ 68 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ರಾಜಸ್ಥಾನದಲ್ಲಿ ಬಿಜೆಪಿ ಮ್ಯಾಜಿಕ್ ಸಂಖ್ಯೆ 100ನ್ನು ದಾಟಿದ್ದು, ಬಹುಮತ ಪಡೆದು ಅಧಿಕಾರಕ್ಕೆ ಬರುವುದು ಬಹುತೇಕ ಖಚಿತವಾಗಿದೆ.