ಜೈಪುರ: ರಾಜಸ್ಥಾನ ಚುನಾವಣೆಗೆ ಭರ್ಜರಿ ಸಿದ್ಧತೆ, ಅಭ್ಯರ್ಥಿಗಳ ಪ್ರಚಾರ ಕಾರ್ಯ ಚುರುಕುಗೊಂಡಿರುವಗಲೇ ಕಾಂಗ್ರೆಸ್ ಗೆ ಆಘಾತವಾಗಿದೆ. ಕಾಂಗ್ರೆಸ್ ಅಭ್ಯರ್ಥಿಯೋರ್ವರು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ವಿಧಿವಶರಾಗಿದ್ದಾರೆ.
ಕರಣ್ ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗುರ್ಮಿತ್ ಸಿಂಗ್ ಕೂನರ್ ಮೃತರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗುರುಮಿತ್ ಸಿಂಗ್ ಕೂನರ್ ಮೂತ್ರಪಿಂದ ಸಮಸ್ಯೆ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು. ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
200 ಕ್ಷೇತ್ರಗಳಿರುವ ರಾಜಸ್ಥಾನ ವಿಧಾನಸಭಾ ಚುನಾವಣೆ ನವೆಂಬರ್ 25ರಂದು ನಡೆಯಲಿದೆ.