ಕೋಟಾ: ಮತ್ತೋರ್ವ ನೀಟ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ಒಂದೇ ವರ್ಷದಲ್ಲಿ ಕೋಟಾದಲ್ಲಿ ನಡೆದ 28ನೇ ಪ್ರಕರಣ ಇದಾಗಿದೆ.
ಪಶ್ಚಿಮ ಬಂಗಾಳ ಮೂಲದ ಫೌರಿದ್ ಹುಸೇನ್ ಮೃತ ವಿದ್ಯಾರ್ಥಿ. ಕೋಟಾದ ವಕ್ಫ್ ನಗರದಲ್ಲಿ ಬಾಡಿಗೆ ಮನೆಯಲ್ಲಿದ್ದು ನೀಟ್ ಪರೀಕ್ಷೆಗೆ ಸಿದ್ದತೆ ನಡೆಸಿದ್ದ. ಇದೀಗ ಮನೆಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ.
ಫೌರಿದ್ ಹುಸೇನ್ ವಾಸವಾಗಿದ್ದ ಬಾಡಿಗೆ ಮನೆಯಲ್ಲಿ ಇತರ ಕೆಲ ವಿದ್ಯಾರ್ಥಿಗಳು ಕೂಡ ಇದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದನೆ.
ಹಲವುಬಾರಿ ಫೋನ್ ಮಾಡಿದೂ ಫೋನ್ ರಿಸೀವ್ ಮಾಡುತ್ತಿರಲಿಲ್ಲ. ಮನೆ ಬಳಿ ಬಂದು ನೋಡಿದಾಗ ಒಳಗಿನಿಂದ ಬಾಗಿಲು ಲಾಕ್ ಆಗಿತ್ತು. ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಗಿಲು ತೆರೆದು ನೋಡಿದಾಗ ಫೌರಿದ್ ಹುಸೇನ್ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ ಎಂದು ಇತರ ವಿದ್ಯಾರ್ಥಿಗಳು ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.