ಸೂಪರ್ ಸ್ಟಾರ್ ರಜನಿಕಾಂತ್ ಪ್ರಮುಖ ಪಾತ್ರದಲ್ಲಿರುವ ʼತಲೈವರ್ 170ʼ ಮುಂಬರುವ ತಮಿಳು ಚಲನಚಿತ್ರವಾಗಿದ್ದು ಅದರಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಚಿತ್ರವನ್ನು ಟಿಜೆ ಜ್ಞಾನವೇಲ್ ನಿರ್ದೇಶಿಸಿದ್ದು ಲೈಕಾ ಪ್ರೊಡಕ್ಷನ್ಸ್ ನಿರ್ಮಿಸುತ್ತಿದೆ. ಈ ಚಿತ್ರದಲ್ಲಿ ಬಾಲಿವುಡ್ ನ ಹಿರಿಯ ನಟ ಅಮಿತಾಬ್ ಬಚ್ಚನ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ.
ಈ ಪಾತ್ರವನ್ನು ಈ ಹಿಂದೆ ಚಿಯಾನ್ ವಿಕ್ರಮ್‌ಗೆ ನೀಡಲಾಗಿತ್ತು ಎಂದು ಹೇಳಲಾಗುತ್ತದೆ. ಈ ಬಗ್ಗೆ ಇನ್ನೂ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಆದರೆ ಬಿಗ್ ಬಿ 32 ವರ್ಷಗಳ ನಂತರ ರಜನಿಕಾಂತ್ ಜೊತೆ ಸೇರಲಿದ್ದು ತಲೈವರ್ 170 ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ರಜನಿ ಮತ್ತು ಅಮಿತಾಬ್ ಬಚ್ಚನ್ ಇಬ್ಬರೂ ಕೊನೆಯದಾಗಿ 1991 ರ ಹಮ್ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು.