alex Certify BIG NEWS: ಕಾಂಗ್ರೆಸ್ ನಾಯಕಿ ಬ್ಲಾಕ್ ಮೇಲ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ರಾಜಕುಮಾರ್ ಟಾಕಳೆ ನನ್ನ ಗಂಡ ಎಂದ ನವ್ಯಶ್ರೀ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ನಾಯಕಿ ಬ್ಲಾಕ್ ಮೇಲ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ರಾಜಕುಮಾರ್ ಟಾಕಳೆ ನನ್ನ ಗಂಡ ಎಂದ ನವ್ಯಶ್ರೀ

ಬೆಳಗಾವಿ; ತಮ್ಮ ವಿರುದ್ಧ ಕೇಳಿ ಬಂದಿರುವ ಬ್ಲ್ಯಾಕ್ ಮೇಲ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ನೀಡಿರುವ ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ, ಆತ ನನ್ನ ಗಂಡ. ರಾಜಕುಮಾರ್ ಟಾಕಳೆ ನನ್ನ ಪತಿ ಎಂದು ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನವ್ಯಶ್ರೀ, ನಾನು ಕಳೆದ 15 ದಿನಗಳಿಂದ ಭಾರತದಲ್ಲಿ ಇರಲಿಲ್ಲ. ಪ್ರಶಸ್ತಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಹೋಗಿದ್ದೆ. ನಾನು ವಾಪಸ್ ಬರುವಷ್ಟರಲ್ಲಿ ನನ್ನ ವಿರುದ್ಧ ಇದೀಗ ಇಲ್ಲಸಲ್ಲದ ಆರೋಪಗಳು ಕೇಳಿಬರುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿಯೂ ನನ್ನ ಬಗ್ಗೆ ಕೆಟ್ಟದಾಗಿ ಬಿಂಬಿಸಲಾಗುತ್ತಿದೆ. ಇದು ನನ್ನ ವಿರುದ್ದ ನಡೆದಿರುವ ಷಡ್ಯಂತ್ರ. ಬೇರೆ ಯಾರದ್ದೋ ಕೈವಾಡವಿದೆ. ಎಲ್ಲವನ್ನೂ ನಾಳೆ ದಾಖಲೆ ಸಮೇತ ವಿವರಿಸುತ್ತೇನೆ ಎಂದವರು ಇದೀಗ ಪ್ರಕರಣಕ್ಕೆ ಮಹತ್ವದ ತಿರುವು ನೀಡಿದ್ದಾರೆ.

ನನ್ನ ವಿರುದ್ಧ ದೂರು ನೀಡಿ, ಎಫ್ ಐ ಆರ್ ದಾಖಲಿಸಿರುವ ವ್ಯಕ್ತಿ ನನ್ನ ಗಂಡ. ಹೌದು. ಸಧ್ಯಕ್ಕೆ ಎಲ್ಲರ ಪ್ರಶ್ನೆ ರಾಜಕುಮಾರ್ ಟಾಕಳೆ ಯಾರು ಎಂಬುದು……ರಾಜಕುಮಾರ್ ಟಾಕಳೆ ನನ್ನ ಗಂಡ. ಅವರು ನನಗೆ ಮೋಸ ಮಾಡುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ಒಟ್ಟಾರೆ ಕಾಂಗ್ರೆಸ್ ನಾಯಕಿ ನವ್ಯಶ್ರೀ ವಿರುದ್ಧದ ಬ್ಲ್ಯಾಕ್ ಮೇಲ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...