ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕೋವಿಡ್ ಸೋಂಕು ತಗುಲಿದೆ. ಅವರಿಗೆ ಕೋವಿಡ್ 19 ಪರೀಕ್ಷೆಯಲ್ಲಿ ಗುರುವಾರ ಪಾಸಿಟಿವ್ ದೃಢಪಟ್ಟಿದೆ. ಸೋಂಕು ದೃಢಪಡ್ತಿದ್ದಂತೆ ಸಚಿವರು ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ.
“ಸಚಿವರು ಗುರುವಾರ ನವದೆಹಲಿಯಲ್ಲಿ ಭಾರತೀಯ ವಾಯುಪಡೆಯ ಕಮಾಂಡರ್‌ಗಳ ಸಮ್ಮೇಳನದಲ್ಲಿ ಭಾಗವಹಿಸಲು ನಿರ್ಧರಿಸಿದ್ದರು. ಆದರೆ ಕೋವಿಡ್ 19 ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ದೃಢಪಟ್ಟ ಬಳಿಕ ಅವರು ಸಮ್ಮೇಳನದಲ್ಲಿ ಭಾಗವಹಿಸ್ತಿಲ್ಲ” ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.
ರಾಜನಾಥ್ ಸಿಂಗ್ ಅವರು ಪ್ರಸ್ತುತ ಸೌಮ್ಯ ರೋಗಲಕ್ಷಣಗಳೊಂದಿಗೆ ಹೋಮ್ ಕ್ವಾರಂಟೈನ್‌ನಲ್ಲಿದ್ದು ವೈದ್ಯರ ತಂಡ ಅವರನ್ನು ಪರೀಕ್ಷಿಸಿದೆ. ವಿಶ್ರಾಂತಿ ಪಡೆಯಲು ಸೂಚಿಸಲಾಗಿದೆ.
ರಾಜನಾಥ್ ಸಿಂಗ್ ಅವರು ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಕಟಿಸಿದ್ದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು. ಆದರೆ ಇದೀಗ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿರೋದ್ರಿಂದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವುದು ಬಹುತೇಕ ಅನುಮಾನ. ಚುನಾವಣೆಗೆ 20 ದಿನ ಬಾಕಿಯಿದ್ದು, ರಾಜನಾಥ್ ಸಿಂಗ್ ಪ್ರಚಾರದಲ್ಲಿ ಭಾಗವಹಿಸೋದು ಸಾಧ್ಯವಿಲ್ಲ ಎಂದು ಊಹಿಸಲಾಗಿದೆ.