
ಜೈಪುರ: ರಜಪೂತ ಕರ್ಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಸುಖದೇವ್ ಸಿಂಗ್ ಗೋಗಮೇಡಿ ಅವರನ್ನು ಹಾಡಹಗಲೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.
ರಾಜಸ್ಥಾನದ ಜೈಪುರದಲ್ಲಿ ಸುಖದೇವ್ ಸಿಂಗ್ ಗೋಗಮೇಡಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಸ್ಥಳದಲ್ಲೇ ಸುಖದೇವ್ ಸಿಂಗ್ ಮೃತಪಟ್ಟಿದ್ದಾರೆ.
ಇಬ್ಬರು ದುಷ್ಕರ್ಮಿಗಳು ಸುಖದೇವ್ ಸಿಂಗ್ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಗುಂಡೇಟಿಗೆ ರಜಪೂತ ಕರ್ಣಿ ಸೇನೆ ಅಧ್ಯಕ್ಷ ಬಲಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ.