ಬೆಳಗಾವಿ: ಪೆಟ್ರೋಲ್, ಡೀಸೆಲ್ ದರ ಏರಿಕೆ ಬಳಿಕ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ಬಸ್ ಪ್ರಯಾಣ ದರ ದುಬಾರಿಯಾಗಲಿದೆ.
ಕಾಂಗ್ರೆಸ್ ಶಾಸಕ ರಾಜು ಕಾಗೆ ಈ ಬಗ್ಗೆ ಸುಳಿವು ನೀಡಿದ್ದಾರೆ. ಶಕ್ತಿ ಯೋಜನೆಯಿಂದ ನಿಗಮ ನಷ್ಟದಲ್ಲಿದೆ. ಡೀಸೆಲ್ ಹಾಗೂ ಬಸ್ ಬಿಡಿ ಭಾಗಗಳ ದರ ಕೂಡ ಹೆಚ್ಚಾಗಿದೆ. ಕಳೆದ ಹತ್ತು ವರ್ಷಗಳಿಂದ ಬಸ್ ಟಿಕೆಟ್ ದರ ಏರಿಕೆ ಮಾಡಿಲ್ಲ. ಬಸ್ ಟಿಕೆಟ್ ದರ ಹೆಚ್ಚಿಸುವ ಚಿಂತನೆಯಲ್ಲಿದ್ದೇವೆ ಎಂದು ರಾಜು ಕಾಗೆ ಹೇಳಿದ್ದಾರೆ.
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಆಸ್ತಿ, ಪರಭಾರೆ ಮಾಡುತ್ತೇವೆ. ಸಂಸ್ಥೆಗೆ ಸೇರಿದ ಹಳೆ ಕಟ್ಟಡ ನವೀಕರಿಸಿ ಬಾಡಿಗೆ ಕೊಡುತ್ತೇವೆ ಎಂದು ಬೆಳಗಾವಿಯಲ್ಲಿ ರಾಜು ಕಾಗೆ ಹೇಳಿದ್ದಾರೆ.