
ಬೆಂಗಳೂರು: ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎನ್.ಡಿ.ಎ. ಒಕ್ಕೂಟದ ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೋಲು ಕಂಡಿದ್ದಾರೆ. ಅವರು 36 ಮತಗಳನ್ನು ಪಡೆದಿದ್ದಾರೆ.
ರಾಜ್ಯಸಭೆ ಚುನಾವಣೆಯ ಅಂತಿಮ ಫಲಿತಾಂಶದ ಮಾಹಿತಿ ಪ್ರಕಾರ ಬಿಜೆಪಿ ಅಭ್ಯರ್ಥಿ ನಾರಾಯಣಸಾ ಕೃಷ್ಣಸಾ ಭಾಂಡಗೆ 47 ಮತ ಪಡೆದಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳಾದ ಜಿ.ಸಿ. ಚಂದ್ರಶೇಖರ 45 ಮತಗಳು, ಅಜಯ್ ಮಾಕೆನ್ 47 ಮತಗಳು, ನಾಸೀರ್ ಹುಸೇನ್ 47 ಮತ ಪಡೆದಿದ್ದಾರೆ.
ಬಿಜೆಪಿ, ಜೆಡಿಎಸ್ ಮೈತ್ರಿ ಕೂಟದ ಐದನೇ ಅಭ್ಯರ್ಥಿಯಾಗಿ ಕಣದಲ್ಲಿದ್ದ ಕುಪೇಂದ್ರ ರೆಡ್ಡಿ ಪರಾಭವಗೊಂಡಿದ್ದಾರೆ.