ಬೆಂಗಳೂರು: ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಇಂದು ದೆಹಲಿಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬುಧವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ನವದೆಹಲಿಗೆ ಪ್ರಯಾಣ ಬೆಳೆಸಿದರು. ರಾಜ್ಯಸಭೆಯಲ್ಲಿ ಇಂದು ವೀರೇಂದ್ರ ಹೆಗ್ಗಡೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿಯಾದ ವೀರೇಂದ್ರ ಹೆಗಡೆಯವರು ಜನಪರ, ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಮನೆ ಮಾತಾಗಿದ್ದಾರೆ. ಕೇಂದ್ರ ಸರ್ಕಾರ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ.