ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ. ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ಪ್ರಕ್ರಿಯೆ ಪ್ರಾರಂಭವಾಗಿದೆ.
ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ರಾಜಾಜಿನಗರ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಮೊದಲು ಮತದಾನ ಮಾಡಿದ್ದಾರೆ.
ರಾಜ್ಯಸಭೆ ಚುನಾವಣೆ ತೀವ್ರ ಕುತೂಹಲ ಮೂಡಿಸಿದ್ದು, ಕಾಂಗ್ರೆಸ್ ಶಾಸಕರನ್ನು ತಮ್ಮ ಅಭ್ಯರ್ಥಿಪರ ಮತಹಾಕಿಸಲೆಂದು ಬಿಜೆಪಿ-ಜೆಡಿಎಸ್ ನಾಯಕರು ಕಸರತ್ತು ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇನ್ನು ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಅಜಯ್ ಮಕೇನ್, ಜಿ.ಸಿ.ಚಂದ್ರಶೇಖರ್, ಡಾ.ಸಯ್ಯದ್ ನಾಸೀರ್ ಕಣದಲ್ಲಿದ್ದರೆ, ಬಿಜೆಪಿಯಿಂದ ನಾರಾಯಣ ಬಾಂಡಗೆ ಹಾಗೂ ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ. ಸಂಜೆ ವೇಳೆಗೆ ಫಲಿತಾಂಶ ಹೊರ ಬೀಳಲಿದೆ.