ಈ ಬಾರಿ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ: ಎರಡು ದಿನದೊಳಗೆ ಪುರಸ್ಕೃತರ ಪಟ್ಟಿ ಪ್ರಕಟ ಸಾಧ್ಯತೆ

ಬೆಂಗಳೂರು: 68 ಸಾಧಕರು, 10 ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರಿಸಲಾಗಿದೆ. ಎರಡು ದಿನಗಳಲ್ಲಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ.

ಮೈಸೂರು ರಾಜ್ಯ ಕರ್ನಾಟಕ ಎಂದು ಮರುನಾಮಕರಣ ಮಾಡಿ 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕನ್ನಡ ಪರವಾಗಿ ಕಾರ್ಯನಿರ್ವಹಿಸಿದ 10 ಸಂಘ-ಸಂಸ್ಥೆಗಳಿಗೆ ‘ಕರ್ನಾಟಕ ಸಂಭ್ರಮ’ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು. 68 ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಈ ಬಾರಿ 68 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲು ತೀರ್ಮಾನಿಸಲಾಗಿದೆ.

ರಾಜ್ಯೋತ್ಸವ ಪ್ರಶಸ್ತಿಗಾಗಿ ಭೌತಿಕವಾಗಿ 2,500, ಸೇವಾ ಸಿಂಧು ಪೋರ್ಟಲ್ ಮೂಲಕ 4,500ಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ಸುಮಾರು 23 ಸಾವಿರಕ್ಕೂ ಅಧಿಕ ಜನ 2000 ಮಂದಿ ಸಾಧಕರನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ನಾಮನಿರ್ದೇಶನ ಮಾಡಿದ್ದಾರೆ. ಸರ್ಕಾರದಿಂದ ರಚಿಸಲಾಗಿರುವ ಪ್ರಶಸ್ತಿ ಸಮಿತಿಯ ತಜ್ಞರು ಅರ್ಜಿಗಳ ಪರಿಶೀಲನೆ ನಡೆಸಿ 1:2 ಅನುಪಾತದಲ್ಲಿ ಅರ್ಹ ಸಾಧಕರ ಪಟ್ಟಿಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಈ ಪಟ್ಟಿಯನ್ನು 1:1 ಅನುಪಾತಕ್ಕೆ ಇಳಿಸಿದ್ದು, ಇನ್ನೆರಡು ದಿನಗಳಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಪುರಸ್ಕೃತರ ಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

https://twitter.com/CMofKarnataka/status/1717456685139374567

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read