
ಕೊಪ್ಪಳ: ರಾಜ್ಯೋತ್ಸವ ಪ್ರಶಸ್ತಿಗೆ 60 ವರ್ಷ ವಯೋಮಿತಿ ಕಡ್ಡಾಯ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಹಣವಾಳ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯೋತ್ಸವ ಪ್ರಶಸ್ತಿಗೆ 60 ವರ್ಷ ವಯಸ್ಸು ಕಡ್ಡಾಯವಾಗಿದೆ. ಈಗಾಗಲೇ ರಾಜ್ಯೋತ್ಸವ ಪ್ರಶಸ್ತಿಗೆ ಸಾಕಷ್ಟು ಅರ್ಜಿಗಳು ಬಂದಿವೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಯಾಗಿದೆ. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಆಯ್ಕೆಗೆ 38 ಸದಸ್ಯರ ಸಮಿತಿ ರಚಿಸಲಾಗಿದೆ. ಶೀಘ್ರವೇ ಆಯ್ಕೆ ಸಮಿತಿಯ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.