alex Certify BREAKING: ರಾಜ್ಯೋತ್ಸವ ಮೆರವಣಿಗೆ ವೇಳೆ ಗಲಾಟೆ; ಹೊಡೆದಾಡಿಕೊಂಡ ಎರಡು ಗುಂಪುಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯೋತ್ಸವ ಮೆರವಣಿಗೆ ವೇಳೆ ಗಲಾಟೆ; ಹೊಡೆದಾಡಿಕೊಂಡ ಎರಡು ಗುಂಪುಗಳು

ಬೆಳಗಾವಿ: ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ ವೇಳೆ ಗಲಾಟೆ ನಡೆದು, ಎರಡು ಗುಂಪಿನ ನಡುವೆ ಹೊಡೆದಾಡಿಕೊಂಡಿರುವ ಘಟನೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಡೆದಿದೆ.

68ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಮೆರವಣಿಗೆ ಸಾಗುತ್ತಿತ್ತು. ಈ ವೇಳೆ ಯುವಕರ ಎರಡು ಗುಂಪುಗಳ ನಡುವೆ ಗಲಾಟೆ ಆರಂಭವಾಗಿದ್ದು, ಹೊಡೆದಾಡಿಕೊಂಡಿದ್ದಾರೆ.

ಮೆರವಣಿಗೆಯಲ್ಲಿ ನೃತ್ಯ ಮಾಡುವ ವಿಚಾರವಾಗಿ ಯುವಕರ ನಡುವೆ ಜಗಳ ಶುರುವಾಗಿದೆ. ವಾಗ್ವಾದ ವಿಕೋಪಕ್ಕೆ ತಿರುಗಿದ್ದು ಯುವಕರು ಕೈಕೈ ಮಿಲಾಸಿಕೊಂಡಿದ್ದಾರೆ. ಯುವಕರ ನಡುವೆ ಗಲಾಟೆ ನಡೆಯುತ್ತಿದರು ಪೊಲೀಸರು ಮೌನವಾಗಿದ್ದರು ಎಂಬ ಆರೋಪ ಕೇಳಿಬಂದಿದೆ. ಗಲಾಟೆ ವೇಳೆ ಮೆರವಣಿಗೆಯಲ್ಲಿದ್ದ ಇತರರ ಮೇಲೂ ಹಲ್ಲೆ ನಡೆಸಲಾಗಿದೆ ಎಂಬ ದೂರು ಕೇಳಿಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...