ಶಿವಮೊಗ್ಗ: ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಅವರ ವಿರುದ್ಧ ದೂರು ದಾಖಲಿಸಿರುವುದಕ್ಕೆ ಶಿವಮೊಗ್ಗದ ರೈತ ಪಂಚಾಯತ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ ಮತ್ತು ಹಾವೇರಿಯಲ್ಲಿ ನಡೆದ ರೈತ ಪಂಚಾಯತ್ ನಲ್ಲಿ ರಾಕೇಶ್ ಟಿಕಾಯತ್ ಭಾಗವಹಿಸಿ ಮಾತನಾಡಿದ್ದರು. ಶಿವಮೊಗ್ಗದಲ್ಲಿ ಅವರ ವಿರುದ್ಧ ಕೇಸು ದಾಖಲಾಗಿದೆ. ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ರಾಕೇಶ್ ಟಿಕಾಯತ್ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ.
ಇದಕ್ಕೆ ಶಿವಮೊಗ್ಗದ ರೈತ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯವರು ನಾಡನ್ನು ಕೊಳ್ಳೆ ಹೊಡೆದವರನ್ನು ಜೊತೆಗಿಟ್ಟುಕೊಂಡು ಓಡಾಡುತ್ತಿದ್ದಾರೆ. ಅವಿವೇಕತನದಿಂದ ರಾಕೇಶ್ ಟಿಕಾಯತ್ ಅವರ ವಿರುದ್ಧ ಕೇಸ್ ದಾಖಲಿಸಿದ್ದಾರೆ. ದೆಹಲಿ ಮಾದರಿಯಲ್ಲಿ ಹೋರಾಟ ನಡೆಸಿ ಎಂದಿದ್ದಕ್ಕೆ ಕೇಸ್ ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾರೆ.