ನವದೆಹಲಿ: ರೈತ ಸಂಘಟನೆಗಳು ಇಂದು ದೇಶಾದ್ಯಂತ ‘ದ್ರೋಹಿ ದಿನ’ ಆಚರಿಸಲಿವೆ. ದೆಹಲಿ ಗಡಿಭಾಗದಲ್ಲಿ ಒಂದು ವರ್ಷದಿಂದ ನಡೆದ ಪ್ರತಿಭಟನೆ ಕೈಬಿಡುವ ಸಂದರ್ಭದಲ್ಲಿ ನೀಡಿದ್ದ ಭರವಸೆಯನ್ನು ಸರ್ಕಾರ ಈಡೇರಿಸದ ಹಿನ್ನಲೆಯಲ್ಲಿ ಹೋರಾಟ ಕೈಗೊಳ್ಳಲಾಗಿದೆ.
ದೆಹಲಿ ಹೋರಾಟದ ಸಂದರ್ಭದಲ್ಲಿ ರೈತ ಸಂಘಟನೆಗಳ ಭರವಸೆ ಈಡೇರಿಸುವುದಾಗಿ ಕೇಂದ್ರ ಸರ್ಕಾರ ಲಿಖಿತ ಭರವಸೆ ನೀಡಿದ್ದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಡಿಸೆಂಬರ್ 9 ರಂದು ಕೈಬಿಡಲಾಗಿತ್ತು. ಆದರೆ, ಇದುವರೆಗೆ ಬೇಡಿಕೆಯ ಬಗ್ಗೆ ಗಮನಹರಿಸದೆ ಕೇಂದ್ರ ಸರ್ಕಾರ ದ್ರೋಹ ಮಾಡಿದೆ.
ದೇಶದ 500ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ. ಎಂ.ಎಸ್.ಪಿ,, ರೈತರ ಮೇಲಿನ ಮೊಕದ್ದಮೆ ವಾಪಸ್ ಬೇಡಿಕೆ ಈಡೇರಿಸದ ಹಿನ್ನಲೆಯಲ್ಲಿ ಇಂದು ದೇಶಾದ್ಯಂತ ವಿರೋಧ ದಿನ ಆಚರಿಸಲಾಗುವುದು.