
ಅಯೋಧ್ಯೆಯಲ್ಲಿ ನಿರ್ಮಾಣ ಮಾಡಿರುವ ಭವ್ಯ ಶ್ರೀ ರಾಮ ಮಂದಿರದಲ್ಲಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆಗೆ ಸಮಯ ನಿಗದಿಯಾಗಿದೆ.
ಜನವರಿ 22ರಂದು ಮಧ್ಯಾಹ್ನ 12:20ಕ್ಕೆ ಶ್ರೀರಾಮನ ಮೂರ್ತಿಯ ಪ್ರತಿಷ್ಠಾಪನೆ ನಡೆಯಲಿದೆ ಎಂದು ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ. ಮೂರ್ತಿ ಪ್ರತಿಷ್ಠಾಪನೆಯ ನಂತರ ನಿಮ್ಮ ಸ್ಥಳಗಳಲ್ಲಿ ಆರತಿ, ಪ್ರಸಾದ ವಿತರಣೆ ಮಾಡಬಹುದು. ಸಂಜೆ ಸೂರ್ಯಾಸ್ತದ ನಂತರ ದೀಪಗಳನ್ನು ಹಚ್ಚಬೇಕು ಎಂದು ಮನವಿ ಮಾಡಿದ್ದಾರೆ.