ಬಾಗಲಕೋಟೆ: ಅಯೋಧ್ಯೆ ಶ್ರೀ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠೆ ದಿನವಾದ ಜನವರಿ 22ರ ಸೋಮವಾರ ಗುಳೇದಗುಡ್ಡ ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸುವ ಪ್ರತಿ ಮಗುವಿನ ಹೆಸರಿನಲ್ಲಿ 5000 ರೂ. ಠೇವಣಿ ಇಡಲಾಗುವುದು.
ಗುಳೇದಗುಡ್ಡದ ಲಾಲ್ ಬಹದ್ದೂರ್ ಶಾಸ್ತ್ರಿ ಪತ್ತಿನ ಸೌಹಾರ್ದ ಸಹಕಾರಿ ವತಿಯಿಂದ ಮಕ್ಕಳ ಅಭಿವೃದ್ಧಿ ಯೋಜನೆಯಡಿ 5 ಸಾವಿರ ರೂ. ಠೇವಣಿ ಇಡಲಾಗುವುದು ಎಂದು ಬ್ಯಾಂಕ್ ಉಪಾಧ್ಯಕ್ಷ ಪ್ರಶಾಂತ ಜವಳಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮಗುವಿಗೆ 18 ವರ್ಷ ಪೂರೈಸಿದಾಗ 25,000 ರೂ. ನೀಡಲಾಗುವುದು. ಇದನ್ನು ಮಗುವಿನ ಶಿಕ್ಷಣಕ್ಕೆ ಬಳಸಿಕೊಳ್ಳಬಹುದು. ಬಾಲರಾಮನ ಪ್ರಾಣ ಪ್ರತಿಷ್ಠೆ ದಿನ ಬಹುಕಾಲ ನೆನಪಿನಲ್ಲಿ ಉಳಿಯಲಿ ಎನ್ನುವ ಉದ್ದೇಶದಿಂದ ಲಾಲ್ ಬಹದ್ದೂರ್ ಶಾಸ್ತ್ರಿ ಪತ್ತಿನ ಸೌಹಾರ್ದ ಸಹಕಾರಿಯಿಂದ ಈ ಯೋಜನೆ ತರಲಾಗಿದೆ ಎಂದು ಹೇಳಿದ್ದಾರೆ.