ಬೆಂಗಳೂರು: ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಹಾಕಲಾಗಿದ್ದ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ ಘಟನೆ ಗಿಡ್ಡಪ್ಪನಹಳ್ಳಿಯಲ್ಲಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗಿಡ್ಡಪ್ಪನಹಳ್ಳಿಯಲ್ಲಿ ದುಷ್ಕರ್ಮಿಗಳು ರಾಮಮಂದಿರ ಬ್ಯಾನರ್ ಹರಿದು ಹಾಕಿದ್ದಾರೆ. ಇಂತಹ ಕೃತ್ಯವೆಸಗಿದ ಕಿಡಿಗೇಡಿಗಳನ್ನು ಬಂಧಿಸಬೇಕೆಂದು ಕೇಸರಿ ಬಾವುಟ ಹಿಡಿದು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಸೂಲಿಬೆಲೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಕಿಡಿಗೇಡಿಗಳ ಬಂಧಿಸುವುದಾಗಿ ಹೇಳಿ ಪ್ರತಿಭಟನಾನಿರತರ ಮನವೊಲಿಸಿದ್ದಾರೆ.