ಹುಬ್ಬಳ್ಳಿ: ರಾಮ ಮಂದಿರ ನಿರ್ಮಿಸುವುದರಿಂದ ಬಡತನ ನಿರ್ಮೂಲನೆಯಾಗುವುದಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜಕೀಯ ಇಚ್ಛಾಶಕ್ತಿ ಕಾರಣಕ್ಕೆ ರಾಮಮಂದಿರ ನಿರ್ಮಾಣ ಮಾಡಲಾಗಿದೆ. ರಾಮ ಮಂದಿರ ನಿರ್ಮಾಣಕ್ಕೆ ನಮ್ಮ ವಿರೋಧ ಇಲ್ಲ. ಆದರೆ, ಸುಪ್ರೀಂ ಕೋರ್ಟ್ ಸೂಚಿಸಿದ ಜಾಗದಲ್ಲಿ ರಾಮಮಂದಿರ ಕಟ್ಟಿಲ್ಲ. ರಾಮ ಮಂದಿರದ ಹೆಸರಿನಲ್ಲಿ ಯಾಕೆ ಮತ ಕೇಳುತ್ತೀರಿ ಎಂದು ಪ್ರಶ್ನಿಸಿದ್ದಾರೆ.
ಕಳೆದ 10 ವರ್ಷದಲ್ಲಿ ಮೋದಿ ಸರ್ಕಾರ ಏನು ಮಾಡಿದೆ? ಜನಪರ ಕಾರ್ಯಕ್ರಮ, ಅಭಿವೃದ್ಧಿ ಕೆಲಸಗಳನ್ನು ಹೇಳಿಕೊಳ್ಳದೆ ರಾಮ, ರಹಿಮ, ಆಫ್ಘಾನಿಸ್ತಾನ, ಪಾಕಿಸ್ತಾನ ಹೆಸರನ್ನು ಹೇಳಿ ಮತ ಕೇಳುತ್ತಿದ್ದಾರೆ. ಇನ್ನು ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ರಾಮಮಂದಿರ ವಿಚಾರ ಹೆಚ್ಚು ಚರ್ಚೆಗೆ ಬರಲಿದೆ ಎಂದು ಹೇಳಿದ್ದಾರೆ.
ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ದರ ಕಡಿಮೆಯಾಗಿದೆಯಾ? ಬಡವರಿಗೆ ಅನುಕೂಲವಾಗುವ ಒಂದು ಕಾರ್ಯಕ್ರಮ ಮಾಡಿಲ್ಲ. ದೇಶ ಹಳ್ಳ ಹಿಡಿದು ಹೋಗಿದೆ ಎಂದು ಹೇಳಿದ್ದಾರೆ.