ನವದೆಹಲಿ: ಪ್ರಜೆಗಳೇ ದೇಶದ ನಿಜವಾದ ನಿರ್ಮಾತೃಗಳು. ನಮ್ಮ ಮಕ್ಕಳ ಭವಿಷ್ಯದ ದೃಷ್ಟಿಯಿಂದ ದೇಶವನ್ನು ಕಟ್ಟಬೇಕು ಎಂದು ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.
ದೇಶದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಿದ ರಾಮನಾಥ್ ಕೋವಿಂದ್, ಸ್ವಾತಂತ್ರ್ಯ ಹೋರಾಟದ ಬಗ್ಗೆ ಸ್ಮರಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರಿಗೆ ನಮನ ಸಲ್ಲಿಸಿದ್ದಾರೆ. ಮಹಾತ್ಮ ಗಾಂಧಿ ತತ್ವಗಳ ಮೇಲೆ ನಾವು ನಂಬಿಕೆ ಇಡಬೇಕು, ದೇಶದ ಜನರ ಪರಿಸ್ಥಿತಿ ಸುಧಾರಿಸಲು ನಾವು ಶ್ರಮಿಸಬೇಕು. ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ನಾವು ಹೆಮ್ಮೆ ಪಡಬೇಕು ಎಂದು ಹೇಳಿದ್ದಾರೆ.
ಯುವಕರು ಸರಿಯಾದ ಮಾರ್ಗದಲ್ಲಿ ನಡೆಯಬೇಕು. ಅಸಮಾನತೆ ವಿರುದ್ಧ ದೇಶದ ಪ್ರತಿಯೊಬ್ಬರು ಧ್ವನಿ ಎತ್ತಬೇಕು ನಿರ್ಗಮಿತ ರಾಷ್ಟ್ರಪತಿ ರಾಮನಾಥ ಕೋವಿಂದ್ ಭಾಷಣ ಮಾಡಿದ್ದಾರೆ.
5 ವರ್ಷಗಳ ಹಿಂದೆ ನಿಮ್ಮ ಚುನಾಯಿತ ಜನಪ್ರತಿನಿಧಿಗಳ ಮೂಲಕ ನಾನು ಅಧ್ಯಕ್ಷನಾಗಿ ಆಯ್ಕೆಯಾಗಿದ್ದೆ. ರಾಷ್ಟ್ರಪತಿಯಾಗಿ ನನ್ನ ಅವಧಿ ಇಂದಿಗೆ ಮುಕ್ತಾಯವಾಗುತ್ತಿದೆ. ನಿಮ್ಮೆಲ್ಲರಿಗೂ ಮತ್ತು ನಿಮ್ಮ ಸಾರ್ವಜನಿಕ ಪ್ರತಿನಿಧಿಗಳಿಗೂ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ನಾನು ಬಯಸುತ್ತೇನೆ ಎಂದು ಅಧಿಕಾರ ತ್ಯಜಿಸುವ ಮುನ್ನಾದಿನದಂದು ರಾಮನಾಥ್ ಕೋವಿಂದ್ ಹೇಳಿದರು.