ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಮಂದಿರ ನಿರ್ಮಾಣದ ನಂತರ ಅಯೋಧ್ಯೆಯಲ್ಲಿ ಮೊದಲ ರಾಮನವಮಿ ನಾಳೆ ನಡೆಯುತ್ತಿದ್ದು, ಉತ್ತರ ಪ್ರದೇಶದ ಅಯೋಧ್ಯೆಗೆ ಲಕ್ಷಾಂತರ ಭಕ್ತರು ಹರಿದು ಬರುತ್ತಿದ್ದಾರೆ.
ನಾಳೆ ಸುಮಾರು 17 ಲಕ್ಷ ಭಕ್ತರು ಅಯೋಧ್ಯೆಗೆ ಆಗಮಿಸುವ ನಿರೀಕ್ಷೆ ಇದೆ. ಹೆಚ್ಚಿನ ಸಂಖ್ಯೆಯಲ್ಲಿ ಅಯೋಧ್ಯೆಗೆ ಬರದಂತೆ ಭಕ್ತರಿಗೆ ಮನವಿ ಮಾಡಲಾಗಿದೆ. ನಿಮ್ಮ ಊರುಗಳಲ್ಲಿಯೇ ರಾಮನವಮಿ ಆಚರಿಸಿ ಎಂದು ಭಕ್ತರಿಗೆ ರಾಮಜನ್ಮಭೂಮಿ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮನವಿ ಮಾಡಿದ್ದಾರೆ.
ಎಲ್ಲರಿಗೂ ಸಾಮಾನ್ಯ ಪ್ರವೇಶ ದ್ವಾರದ ಮೂಲಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಭಕ್ತರು ಬರುವ ಹಿನ್ನೆಲೆ ವಿಶೇಷ ವ್ಯವಸ್ಥೆಗಳಿಗೆ ನಿರ್ಬಂಧ ಹೇರಲಾಗಿದೆ. ವಿಐಪಿ, ವಿವಿಐಪಿಗಳಿಗೆ ವಿಶೇಷ ಪ್ರವೇಶಕ್ಕೆ ರಾಮ ಮಂದಿರ ಟ್ರಸ್ಟ್ ನಿರ್ಬಂಧ ಹೇರಿದೆ. ಮೂರು ದಿನಗಳವರೆಗೆ ರಾಮಮಂದಿರದಲ್ಲಿ ವಿಶೇಷ ಪ್ರವೇಶ ಇರುವುದಿಲ್ಲ. ಎಲ್ಲರಿಗೂ ಸಾಮಾನ್ಯ ಪ್ರವೇಶ ದ್ವಾರದ ಮೂಲಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚು ಭಕ್ತರು ಬರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.