![](https://kannadadunia.com/wp-content/uploads/2019/09/HD-DeveGowda1.jpg)
ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರ ರಾಷ್ಟ್ರ ಮತ್ತು ವಿಶ್ವಕ್ಕೆ ಮಾನವೀಯತೆಯ ಸಂಕೇತವಾಗಲಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆಶಿಸಿದ್ದಾರೆ.
ರಾಜ್ಯಸಭೆಯಲ್ಲಿ ಆರ್ಥಿಕತೆಯ ಬಗ್ಗೆ ಶ್ವೇತಪತ್ರದ ಮೇಲೆ ಮಾತನಾಡಿದ ಅವರು, ಲಕ್ಷಾಂತರ ಭಾರತೀಯರಿಗೆ ಸಂತೋಷದ ಕ್ಷಣವಾದ ರಾಮ ಮಂದಿರದ ಪ್ರತಿಷ್ಠಾಪನಾ ಸಮಾರಂಭದ ನೇತೃತ್ವ ವಹಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸಿದರು.ಪ್ರಧಾನಿ ಮೋದಿ ಅವರು 11 ದಿನ ಉಪವಾಸ ಆಚರಿಸಿ ಪ್ರಾಣಪ್ರತಿಷ್ಠಾಪನೆ ನೆರವೇರಿಸಿದ್ದಾರೆ ಎಂದರು.
ಮಾಜಿ ಪ್ರಧಾನಿಗಳಾದ ನರಸಿಂಹ ರಾವ್ ಮತ್ತು ಚೌಧರಿ ಚರಣ್ ಸಿಂಗ್ ಮತ್ತು ಕೃಷಿ ವಿಜ್ಞಾನಿ ಎಂ.ಎಸ್.ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದನ್ನು ಶ್ಲಾಘಿಸಿದರು.