ಬೆಂಗಳೂರು : ಸಿಎಂ ಸಿದ್ದರಾಮಯ್ಯರ ಮನೆಗೂ ರಾಮ ಅಕ್ಷತೆ ತಲುಪುತ್ತದೆ ಎಂದು ಮಾಜಿ ಶಾಸಕ ಸಿ.ಟಿ ರವಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಸಿಟಿ ರವಿ ‘ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೂ ರಾಮ ಅಕ್ಷತೆ ತಲುಪುತ್ತದೆ… ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಬೇಕೆಂದು ಕಾಂಗ್ರೆಸ್ ಎಂದು ಕೂಡಾ ಬಯಸಿರಲಿಲ್ಲ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸುವ ಬಯಕೆ ಕಾಂಗ್ರೆಸ್ ಪಕ್ಷಕ್ಕೆ ಇದ್ದಿದ್ದೇ ಆದಲ್ಲಿ, ಸ್ವತಂತ್ರ ಭಾರತದಲ್ಲಿ ನಾವು ಹೋರಾಟ ಮಾಡುವ ಅಗತ್ಯವಿರಲಿಲ್ಲ, ಸ್ವಾತಂತ್ರ್ಯ ಲಭಿಸಿದ ಆರಂಭದಲ್ಲೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿತ್ತು ಎಂದು ಸಿ.ಟಿ ರವಿ ಹೇಳಿದ್ದಾರೆ.