alex Certify ರಾಮ ಮಂದಿರ ಮಂತ್ರಾಕ್ಷತೆ ವಿತರಣೆ ಮಾಡುತ್ತಿದ್ದ ಸಂಚಾಲಕನ ಮೇಲೆ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಮ ಮಂದಿರ ಮಂತ್ರಾಕ್ಷತೆ ವಿತರಣೆ ಮಾಡುತ್ತಿದ್ದ ಸಂಚಾಲಕನ ಮೇಲೆ ಹಲ್ಲೆ

ಮಂಗಳೂರು: ರಾಮ ಮಂದಿರ ಮಂತ್ರಾಕ್ಷತೆ ವಿತರಣೆ ಮಾಡುತ್ತಿದ್ದ ಸಂಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮುಂಡೂರಿನಲ್ಲಿ ನಡೆದಿದೆ.

ಸಂತೋಷ್ ಹಲ್ಲೆಗೊಳಗಾದ ಸಂಚಾಲಕ. ಸಂತೋಷ್ ಮುಂಡೂರಿನಲ್ಲಿ ಮಂತ್ರಾಕ್ಷತೆ ಹಂಚುವ ಜವಾಬ್ದಾರಿ ವಹಿಸಿಕೊಂಡಿದ್ದರು ಎನ್ನಲಾಗಿದೆ. ಮನೆ ಮನೆಗೆ ಮಂತ್ರಾಕ್ಷತೆ ವಿತರಣೆ ಮಾಡುತ್ತಿದ್ದಾಗ ಸ್ಥಳೀಯ ನಿವಾಸಿ ಧನಂಜಯ್ ಹಾಗೂ ಆತನ ಸಹಚರರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಗಲಾಟೆ ವೇಳೆ ತಡೆಯಲು ಬಂದ ಸಂತೋಷ್ ತಾಯಿ ಮೇಲೂ ಹಲ್ಲೆ ನಡೆಸಿದ್ದು, ಗಾಯಾಳುಗಳಿಬ್ಬರೂ ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...