ಅಯೋಧ್ಯೆ: ಅಯೋಧ್ಯೆ ರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹವೇ ಫೈನಲ್ ಆಗಿದೆ. ಈ ಕುರಿತು ರಾಮಜನ್ಮಭೂಮಿ ಟ್ರಸ್ಟ್ ಅಧಿಕೃತ ಘೋಷಣೆ ಮಾಡಿದೆ.
ಅರುಣ್ ಯೋಗಿರಾಜ್ ಕೆತ್ತಿರುವ 5 ವರ್ಷದ ಬಾಲರಾಮನ ವಿಗ್ರವೇ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೆ ಆಯ್ಕೆ ಮಾಡಲಾಗಿದೆ ಎಂದು ರಾಮಜನ್ಮಭೂಮಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.
ರಾಮಲಲ್ಲಾ ವಿಗ್ರಹವನ್ನು ಹೊಸ ದೇವಾಲಯದ ಗರ್ಭಗುಡಿಯಲ್ಲಿ ಇರಿಸಲಾಗುವುದು. ಪ್ರಾಣ ಪ್ರತಿಷ್ಠಾ ಮುಹೂರ್ತವನ್ನು ವಾರಣಾಸಿಯ ಗಣೇಶ್ವರ ಶಾಸ್ತ್ರಿ ದ್ರಾವಿಡ್ ನಿರ್ಧರಿಸಿದ್ದಾರೆ. ಧಾರ್ಮಿಕ ವಿಧಿವಿಧಾನಗಳು ಜ.16ರಿಂದ ಆರಂಭವಾಗಲಿದ್ದು, ಜ.21ರವರೆಗೆ ನಡೆಯಲಿದೆ. ಜನವರಿ 22ರಂದು ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.