ಮೈಸೂರು: ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಮಾಜಿ ಸಚಿವ ರಾಮದಾಸ್ ಅವರಿಗೆ ಟಿಕೆಟ್ ಕೈತಪ್ಪಿದೆ. ಇದರಿಂದ ಅಸಮಾಧಾನಗೊಂಡಿರುವ ರಾಮದಾಸ್ ಇಂದು ಕಾರ್ಯಕರ್ತರ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.
30 ವರ್ಷಗಳಿಂದ ತಾಯಿ ಮನೆಯಲ್ಲಿದ್ದ ನನ್ನನ್ನು ಮನೆಯಿಂದ ಹೊರಗೆ ಹಾಕಿದ್ದಾರೆ. ತಾಯಿ ಮನೆಯಲ್ಲಿ ಇರಬೇಕೇ ಬೇಡವೇ ಎಂಬುದರ ಬಗ್ಗೆ ಮಂಗಳವಾರ ಸಂಜೆ ತೀರ್ಮಾನಿಸುತ್ತೇನೆ. ನಾನು ಯಾರನ್ನು ಭೇಟಿ ಮಾಡುವುದಿಲ್ಲ. ಯಾರ ಜೊತೆಗೂ ಮಾತುಕತೆ ನಡೆಸುವುದಿಲ್ಲ. ಕಾರ್ಯಕರ್ತರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.