ಬೆಂಗಳೂರು: ಕೆಎಸ್ಆರ್ಟಿಸಿ ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಿಗೆ 5800 ಹೊಸ ಬಸ್ ಗಳ ಸೇರ್ಪಡೆಗೆ ನಿರ್ಧರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ರಾಜ್ಯ ರಸ್ತೆ ಸಾರಿಗೆ ನಿಗಮದ 63ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಶಾಂತಿನಗರ ಕೆಎಸ್ಆರ್ಟಿಸಿ ಕೇಂದ್ರೀಯ ವಿಭಾಗ ಘಟಕ 2ರಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪುನಶ್ಚೇಚೇತನಗೊಳಿಸಿದ ಐರಾವತ ಕ್ಲಬ್ ಕ್ಲಾಸ್ ವಾಹನಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ನಾಲ್ಕು ನಿಗಮಗಳಿಗೆ 5,800 ಹೊಸ ಬಸ್ ಗಳ ಸೇರ್ಪಡೆಗೆ ನಿರ್ಧರಿಸಲಾಗಿದೆ. ಅನುಕಂಪದ ಆಧಾರದ ನೇಮಕಾತಿಗೆ ಮತ್ತೆ ಚಾಲನೆ ನೀಡಲಾಗಿದೆ. ಕಳೆದ 18 ತಿಂಗಳಲ್ಲಿ ಒಂದು ಸಾವಿರ ಮೃತ ನೌಕರರ ಅವಲಂಬಿತರಿಗೆ ಅನುಕಂಪದ ನೌಕರಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮೃತ ನೌಕರರ ಅವಲಂಬಿತರಿಗೆ ವಿವಿಧ ಪರಿಹಾರ ಯೋಜನೆಯಡಿ ಪರಿಹಾರದ ಮೊತ್ತವನ್ನು ಸಚಿವರು ವಿತರಿಸಿದ್ದಾರೆ.