
ರಾಮನಗರ: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಅಲ್ಪ ಪ್ರಮಾಣದ ಲೋಡ್ ಶೆಡ್ಡಿಂಗ್ ಇದೆ ಎಂದು ಸಾರಿಗೆ ಸಚಿವರು ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಅಘೋಷಿತ ಲೋಡ್ ಶೆಡ್ಡಿಂಗ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಮಳೆ ಇಲ್ಲದೆ ಬರಗಾಲದ ಪರಿಸ್ಥಿತಿ ಇದೆ. ಜಲಾಶಯಗಳಲ್ಲಿ ನೀರು ಕಡಿಮೆಯಾಗಿದ್ದು, ವಿದ್ಯುತ್ ಉತ್ಪಾದನೆ ಕುಸಿತವಾಗಿದೆ. ಹೀಗಾಗಿ ಅಲ್ಪ ಪ್ರಮಾಣದಲ್ಲಿ ಲೋಡ್ ಶೆಡ್ಡಿಂಗ್ ಇದೆ ಎಂದು ಹೇಳಿದ್ದಾರೆ.
ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ವಿದ್ಯುತ್ ಗಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದು, ಅನ್ಯ ರಾಜ್ಯಗಳಿಂದ ವಿದ್ಯುತ್ ಪಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.