
ರಾಮನಗರ: ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಐವರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್ ಬಳಿ ನಡೆದಿದೆ.
ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳು ಕಾರ್ ನಲ್ಲಿ ಸಿಲುಕಿ ಪರದಾಟ ನಡೆಸಿದ್ದಾರೆ. ಕ್ರೇನ್ ಸಹಾಯದಿಂದ ಗಾಯಾಳುಗಳ ರಕ್ಷಣಾ ಕಾರ್ಯ ನಡೆದಿದೆ. ಮಲೆ ಮಹದೇಶ್ವರ ಬೆಟ್ಟದಿಂದ ಕಾರ್ ನಲ್ಲಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.