alex Certify BREAKING: ಕ್ಯಾಂಟರ್ ಗೆ ಟಿಟಿ ವಾಹನ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕ್ಯಾಂಟರ್ ಗೆ ಟಿಟಿ ವಾಹನ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ರಾಮನಗರ: ಕ್ಯಾಂಟರ್ ಗೆ ಟಿಟಿ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಮುದುಗೆರೆ ಗೇಟ್ ಬಳಿ ನಡೆದಿದೆ.

ಕ್ಯಾಂಟರ್ ವಾಹನಕ್ಕೆ ಹಿಂಬದಿಯಿಂದ ಬಂದ ಟಿಟಿ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಟಿಟಿ ವಾಹನದಲ್ಲಿದ್ದ ಕೃಷ್ಣ ಮತ್ತು ಮಹೇಶ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಾಹನದಲ್ಲಿದ್ದ 5ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ. ಮೃತರು ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಚಿಕ್ಕಾಡೆ ನಿವಾಸಿಗಳಾಗಿದ್ದಾರೆ. ಬೆಂಗಳೂರು -ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಇವರು ತಿರುಪತಿಗೆ ಹೋಗಿ ಊರಿಗೆ ವಾಪಸ್ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಚನ್ನಪಟ್ಟಣ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...