alex Certify ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದವನಿಗೆ ಗುಂಡೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದವನಿಗೆ ಗುಂಡೇಟು

ರಾಮನಗರ: ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದವನ ಮೇಲೆ ಫೈರಿಂಗ್ ಮಾಡಲಾಗಿದೆ. ಹಲ್ಲೆ ನಡೆಸಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿ ಮತಿನ್ ಕಾಲಿಗೆ ಗುಂಡು ಹಾರಿಸಲಾಗಿದೆ. ರಾಮನಗರ ಟೌನ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮೂರು ದಿನಗಳ ಹಿಂದೆ ವಡೇರಹಳ್ಳಿಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಗಲಾಟೆ ನಂತರ ಮತಿನ್ ಬೆಂಗಳೂರಿನಲ್ಲಿ ತಲೆಮರಿಸಿಕೊಂಡಿದ್ದು, ಆತನನ್ನು ಪೊಲೀಸರು ಬಂಧಿಸಿ ಸಂಜೆ ಸ್ಥಳ ಮಹಜರು ನಡೆಸಲು ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಆರೋಪಿ ಪರಾರಿ ಆಗಲು ಯತ್ನಿಸಿದ್ದಾನೆ. ಆತ್ಮ ರಕ್ಷಣೆಗಾಗಿ ಮತಿನ್ ಮೇಲೆ ಡಿವೈಎಸ್ಪಿ ದಿನಕರ ಶೆಟ್ಟಿ ಗುಂಡು ಹಾರಿಸಿದ್ದಾರೆ. ಗಾಯಾಳು ಮತಿನ್ ನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ಸೇರಿಸಿದ ಪೊಲೀಸರು ಚಿಕಿತ್ಸೆ ಕೊಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...