ರಾಮನಗರ: ಮೇಕೆದಾಟು ಪಾದಯಾತ್ರೆ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಸ್ತಾಗಿದ್ದಾರೆ. ಬಿಸಿಲಿನ ಕಾರಣಕ್ಕೆ ಸುಸ್ತಾದ ಸಿದ್ದರಾಮಯ್ಯ ಸ್ವಲ್ಪ ದೂರ ನಡೆಯುತ್ತಿದ್ದಂತೆ ಬಳಲಿದ್ದಾರೆ.
ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದ ಅವರು ನಡಿಗೆ ಬಿಟ್ಟು ಕಾರ್ ಏರಿದ್ದಾರೆ. ಬೆಳಗ್ಗೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮೇಕೆದಾಟು ಸಂಗಮ ಕ್ಷೇತ್ರದಲ್ಲಿ ಪಾದಯಾತ್ರೆಗೆ ಚಾಲನೆ ನೀಡಲಾಗಿದೆ.
ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಯೋಜನೆ ಜಾರಿಗೆ ಪಾದಯಾತ್ರೆ ಕೈಗೊಳ್ಳಲಾಗಿದೆ. ಪಕ್ಷದ ನಾಯಕರು, ಜನಪ್ರತಿನಿಧಿಗಳು, ಕಲಾವಿದರು ಸೇರಿದಂತೆ ಅಪಾರ ಸಂಖ್ಯೆಯ ಜನ ಭಾಗವಹಿಸಿದ್ದಾರೆ. ಸ್ವಲ್ಪದೂರ ನಡೆದ ಸಿದ್ಧರಾಮಯ್ಯ ಕಾರ್ ಹತ್ತಿದ್ದಾರೆ.