
ರಾಮನಗರ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಹತ್ಯೆ ಮಾಡಿದ ಘಟನೆ ಕನಕಪುರ ತಾಲೂಕಿನ ಹಲಸಿನಮರದದೊಡ್ಡಿ ಗ್ರಾಮದ ಬಳಿ ನಡೆದಿದೆ.
ಮೂರ್ತಿ(35) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಹಲಸಿನಮರದ ದೊಡ್ಡಿ ಬಳಿ ಮೂರ್ತಿಯನ್ನು ಹತ್ಯೆ ಮಾಡಲಾಗಿದೆ. ನಿನ್ನೆ ರಾತ್ರಿ ಗ್ರಾಮದ ಸಮೀಪ ನಡೆದುಕೊಂಡು ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.