ರಾಮನಗರ: ಕೌಟುಂಬಿಕ ಕಲಹದಿಂದ ಪತ್ನಿಯನ್ನು ಹತ್ಯೆ ಮಾಡಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.
ರಾಮನಗರದ ಗುಡ್ಡ ವೀರನಹೊಸಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಚಾಕುವಿನಿಂದ ಪತ್ನಿಯ ಕತ್ತು ಕೊಯ್ದು ಪತಿ ಜಮೀನಿನಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೌಟುಂಬಿಕ ಕಲಹವೇ ಘಟನೆಗೆ ಕಾರಣವೆನ್ನಲಾಗಿದೆ. ಕೋಡಿಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.