alex Certify ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ

ರಾಮನಗರ: ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ವಿಶೇಷಚೇತನ ಮಹಿಳೆ ಮೇಲೆ ಪರಿಚಯಸ್ಥ ಅತ್ಯಾಚಾರ ಎಸಗಿದ್ದಾನೆ.

ರಾಮನಗರ ತಾಲೂಕಿನ 50 ವರ್ಷದ ಮಾತು ಬಾರದ ಮಹಿಳೆ ರಾಮನಗರದ ಪರಿಚಯಸ್ಥರ ಮನೆಯಲ್ಲಿ ಕೆಲಸ ಮಾಡುತ್ತಿದ್ದು, ಅ. 2 ರಂದು ಕೆಲಸ ಮುಗಿಸಿ ಮನೆಗೆ ಮರಳಲು ರಾಮನಗರದ ಬಸ್ ನಿಲ್ದಾಣಕ್ಕೆ ತೆರಳಿದ್ದಾರೆ. ಬಸ್ ಗಾಗಿ ಕಾಯುತ್ತಿದ್ದ ವೇಳೆ ಅಲ್ಲಿಗೆ ಬಂದ ಉಮೇಶ ಎಂಬಾತ ಬೈಕ್ ನಲ್ಲಿ ಕರೆದೊಯ್ಯುವುದಾಗಿ ಮಹಿಳೆಯನ್ನು ಕುಂಭಾಪುರ ಗ್ರಾಮದ ರೈಲ್ವೆ ಬ್ರಿಡ್ಜ್ ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ ಕೊಲೆ ಬೆದರಿಕೆ ಹಾಕಿದ್ದಾನೆ.

ಮನೆಗೆ ಮರಳಿದ ಮಹಿಳೆ ತನ್ನ ಸಹೋದರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಊರಿನ ಮುಖಂಡರು ವಿಚಾರಣೆ ನಡೆಸಿದಾಗ ಆರೋಪಿ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ. ಪೊಲೀಸರಿಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾದ ನಂತರ ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...