ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲೂಕು ಮರಳವಾಡಿ ಹೋಬಳಿಯ ಗ್ರಾಮವೊಂದರಲ್ಲಿ ಅಪ್ರಾಪ್ತೆಯನ್ನು ಹೊಲಕ್ಕೆ ಕರೆದೊಯ್ದು ಇದು ಅತ್ಯಾಚಾರ ಎಸೆಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಿರಣ್ ಕುಮಾರ್(23) ಬಂಧಿತ ಆರೋಪಿ. ಗುರುವಾರ ಸಂಜೆ ಮನೆಯಲ್ಲಿದ್ದ ಅಪ್ರಾಪ್ತೆಯನ್ನು ಸಮೀಪದ ಹೊಲಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಕೆಲಸ ಮುಗಿಸಿ ಸಂಜೆ ಮನೆಗೆ ಬಂದ ಪೋಷಕರಿಗೆ ಮನೆಯಲ್ಲಿ ಮಗಳು ಕಂಡಿಲ್ಲ. ಈ ವೇಳೆ ಹುಡುಕಾಟ ನಡೆಸಿದಾಗ ಸಮೀಪದ ಹೊಲದಲ್ಲಿ ಪತ್ತೆಯಾಗಿದ್ದಾರೆ. ಈ ವೇಳೆ ಆರೋಪಿ ಪರಾರಿಯಾಗಿದ್ದು, ಹಾರೋಹಳ್ಳಿ ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.