ರಾಮನಗರ: ಮಹಿಳೆಯ ಸ್ನಾನದ ದೃಶ್ಯದ ವಿಡಿಯೋವನ್ನು ವಾಟ್ಸಾಪ್ ಗ್ರೂಪ್ ನಲ್ಲಿ ಶೇರ್ ಮಾಡಲಾಗಿದ್ದು, ನೊಂದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಪ್ರತಿಬಂಧಕ ಹೆಸರಿನ ವಾಟ್ಸಾಪ್ ಗ್ರೂಪ್ ನಲ್ಲಿ ವಿಡಿಯೋ ಶೇರ್ ಮಾಡಿದ್ದು, ಧನರಾಜ್(28) ಎಂಬಾತನ ವಿರುದ್ಧ ಸಂತ್ರಸ್ತ ಮಹಿಳೆ ದೂರು ನೀಡಿದ್ದಾರೆ.
ರಾಮನಗರ ಜಿಲ್ಲೆ ಕನಕಪುರ ಟೌನ್ ಪೊಲೀಸ್ ಠಾಣೆಗೆ ಮಹಿಳೆ ದೂರು ನೀಡಲಾಗಿದೆ. ಆಗಸ್ಟ್ 17ರಂದು ವಾಟ್ಸಾಪ್ ಗ್ರೂಪ್ ನಲ್ಲಿ ವಿಡಿಯೋ ಶೇರ್ ಮಾಡಿದ ಆರೋಪ ಕೇಳಿ ಬಂದಿದೆ. ವಾಟ್ಸಾಪ್ ಗ್ರೂಪ್ ನಲ್ಲಿ ವಿಡಿಯೋ ಹಾಕಿದ್ದನ್ನು ನೋಡಿ ಮಹಿಳೆ ದೂರು ನೀಡಿದ್ದಾರೆ. ಸಂತ್ರಸ್ತ ಮಹಿಳೆಯ ದೂರದ ಸಂಬಂಧಿಯಾಗಿರುವ ಆರೋಪಿ ಧನರಾಜ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.