
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಹುಲಿಬೆಲೆ ಬಳಿ ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.
ಲಾರಿ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಲಾರಿ ಡಿಕ್ಕಿ ಗುದ್ದಿದ ರಭಸಕ್ಕೆ ಮೃತದೇಹಗಳು ಕಾರ್ ನಲ್ಲಿಯೇ ಛಿದ್ರವಾಗಿವೆ. ಸ್ಥಳಕ್ಕೆ ಕನಕಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಕನಕಪುರ ಆಸ್ಪತ್ರೆಗೆ ಮೃತದೇಹಗಳನ್ನು ಶಿಫ್ಟ್ ಮಾಡಲಾಗಿದೆ. ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.