ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ ಹಣ, ಚಿನ್ನಾಭರಣಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆಯುತ್ತಿದ್ದಾರೆ.
ಈ ನಿಟ್ಟಿನಲ್ಲಿ ರಾಮನಗರದಲ್ಲಿ 10 ಕೋಟಿ ಮೌಲ್ಯದ ಚಿನ್ನವನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಇದೇ ವೇಳೆ ದಾವಣಗೆರೆಯಲ್ಲಿ 12.50 ಕೋಟಿ ಮೌಲ್ಯದ ಚಿನ್ನ, ವಜ್ರಗಳನ್ನು ವಶಕ್ಕೆ ಪಡೆಯಲಾಗಿದೆ.
ದಾವಣಗೆರೆಯ ಲೋಕಿಕೆರೆ ಚೆಕ್ ಪೋಸ್ಟ್ ಮೂಲಕ ದಾಖಲೆ ಇಲ್ಲದೇ ಚಿನ್ನಾಭರಣ, ವಜ್ರವನ್ನು ಸಾಗಿಸಲಾಗುತ್ತಿತ್ತು. ಅಧಿಕಾರಿಗಳು ವಾಹನ ತಪಾಸಣೆ ನಡೆಸಿದಾಗ ಚಿನ್ನ,ವಜ್ರದ ಆಭರಣಗಳು ಪತ್ತೆಯಾಗಿದ್ದು, ಸೂಕ್ತ ದಾಖಲೆಗಳಿಲ್ಲದ ಕಾರಣಕ್ಕೆ ಜಪ್ತಿ ಮಾಡಿದ್ದಾರೆ.