
ರಾಮನಗರ: ಮಾನವ ಹಾಗೂ ಪ್ರಾಣಿಗಳ ನಡುವಿನ ಸಂಘರ್ಷ ಮುಂದುವರೆದಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕ್ಷೇತ್ರದಲ್ಲಿ ಕಾಡಾನೆ ದಾಳಿಗೆ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಬರಡನಹಳ್ಳಿಯಲ್ಲಿ ತೋಟಕ್ಕೆ ತೆರಳಿದ್ದ ಮಹಿಳೆ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ದುಂಡಮ್ಮ (35) ಆನೆ ದಾಳಿಯಿಂದ ಗಂಭೀರ ಸ್ಥಿತಿ ತಲುಪಿದ್ದಾರೆ.
ಆನೆ ದಾಳಿಗೆ ದುಂಡಮ್ಮ ಅವರ ಎಡಗೈ ಮುರಿದಿದೆ. ಗ್ರಾಮಸ್ಥರು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.