alex Certify BIG NEWS: ಹೊಸ ವರ್ಷದ ದಿನವೇ ಕಾಡಾನೆ ದಾಳಿ; ಮಹಿಳೆ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೊಸ ವರ್ಷದ ದಿನವೇ ಕಾಡಾನೆ ದಾಳಿ; ಮಹಿಳೆ ಸ್ಥಿತಿ ಗಂಭೀರ

ರಾಮನಗರ: ಮಾನವ ಹಾಗೂ ಪ್ರಾಣಿಗಳ ನಡುವಿನ ಸಂಘರ್ಷ ಮುಂದುವರೆದಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕ್ಷೇತ್ರದಲ್ಲಿ ಕಾಡಾನೆ ದಾಳಿಗೆ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಬರಡನಹಳ್ಳಿಯಲ್ಲಿ ತೋಟಕ್ಕೆ ತೆರಳಿದ್ದ ಮಹಿಳೆ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ದುಂಡಮ್ಮ (35) ಆನೆ ದಾಳಿಯಿಂದ ಗಂಭೀರ ಸ್ಥಿತಿ ತಲುಪಿದ್ದಾರೆ.

ಆನೆ ದಾಳಿಗೆ ದುಂಡಮ್ಮ ಅವರ ಎಡಗೈ ಮುರಿದಿದೆ. ಗ್ರಾಮಸ್ಥರು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...