
ಅಮೆರಿಕದ ನ್ಯೂಯಾರ್ಕ್ ನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದ ರಾಮನಗರ ಮೂಲದ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಶುಭಾಂಗ್ ಹೇರ್ಳೆ (27) ಮೃತ ವಿದ್ಯಾರ್ಥಿ. ರಾಮನಗರದ ರಾಘವೇಂದ್ರ ಕಾಲೋನಿಯ ನಿವಾಸಿ ಶುಭಾಂಗ್ ನ್ಯೂಯಾರ್ಕ್ ನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದರು.
ಇದ್ದಕ್ಕಿದ್ದಂತೆ ತಮ್ಮದೇ ಕೊಠಡಿಯಲ್ಲಿ ಕುಸಿದು ಬಿದ್ದ ಶುಭಾಂಗ್ ನನ್ನು ಸಹಪಾಠಿಗಳು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಇಂದು ರಾತ್ರಿ ಬೆಂಗಳೂರಿಗೆ ತರಲಾಗುತ್ತಿದೆ.